ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಶ್ರೀನಗರ(Srinagar): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಿ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾಗಿ ಗೊತ್ತಾಗಿದೆ.
ದಕ್ಷಿಣ ಕಾಶ್ಮೀರದ ಅವಂತಿಪೋರಾದ ನಾಡರ್ ಟ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದಿದ್ದವು. ಉಗ್ರರು ಅಡಗಿ ಕುಳಿತಿರುವ ಸ್ಥಳದತ್ತ ಭದ್ರತಾ ಪಡೆಗಳು ತಲುಪುತ್ತಿದ್ದಂತೆಯೇ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಭದ್ರತಾ ಪಡೆ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ್ದು, ಸ್ಥಳವನ್ನು ಸುತ್ತುವರೆದು ಉಗ್ರರಿಗೆ ತಕ್ಕ ಉತ್ತರ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಮಟಾಷ್ ಆಗಿದ್ದು ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಲಭ್ಯ ಮಾಹಿತಿ ಪ್ರಕಾರ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು ಆತಂಕದ ವಾತಾವರಣ ಮುಂದುವರಿದಿದೆ.
ಇದನ್ನು ಓದಿ: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮ*ಗೆ ಯತ್ನ. *ತಂದೆ ಮಗ ದುರ್ಮರಣ.