ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news): ಹಾವೇರಿ(Haveri) : ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ(Gold Chain) ಕಿತ್ತು ಪರಾರಿಯಾಗಲು ಯತ್ನಿಸಿದ್ದ ಕಳ್ಳನನ್ನು ಸಾರ್ವಜನಿಕರು(Public’s) ಬೆನ್ನಟ್ಟಿ ಹಿಡಿದು ಪೊಲೀಸರಿಗೆ(Police) ಒಪ್ಪಿಸಿದ ಘಟನೆ ನಡೆದಿದೆ.
ಹಾವೇರಿ(Haveri) ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ(Hirekeruru) ಚನ್ನಳ್ಳಿ ಹಾಗೂ ವರಹ ಗ್ರಾಮದ(Chennalli and Varaha Village) ನಡುವಿನ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರ ಚಿನ್ನದ ಸರ ಕದ್ದು(Gold Chain Theft) ಬೈಕ್‌ನಲ್ಲಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಸ್ಥಳೀಯರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ.
ಬಂಧಿತ ಆರೋಪಿಯನ್ನು ಸಂತೋಷ ಗುಡ್ಡಪ್ಪ ಹಳೇಮನಿ ಎಂದು ಗುರುತಿಸಲಾಗಿದ್ದು, ಆತ ಬ್ಯಾಡಗಿ(Byadagi) ತಾಲ್ಲೂಕಿನ ಚಿನ್ನಿಕಟ್ಟಿ ಗ್ರಾಮದ(Chinnikatti Village) ನಿವಾಸಿ ಎನ್ನಲಾಗಿದೆ.
ಗುಡ್ಡಸ ರಸ್ತೆ ಹಾಗೂ ನಿರ್ಜನ ರಸ್ತೆಯನ್ನು ಗುರಿಯಾಗಿಸಿಕೊಂಡು ಮಹಿಳೆಯರ ಚಿನ್ನ ಕಳವು ಮಾಡುತ್ತಿದ್ದ ಆರೋಪಿಯು, ರಾಧಾ ಎಂಬ ಮಹಿಳೆಯ ಸುಮಾರು 40 ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಘಟನೆಯ ವೇಳೆ ಎಚ್ಚೆತ್ತ ಸ್ಥಳೀಯರು ಆರೋಪಿಯನ್ನು ಬೆನ್ನಟ್ಟಿ ಹಿಡಿದು, ಬಳಿಕ ಹಿರೇಕೆರೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ(Hirekeruru Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
