ಭಟ್ಕಳ(BHATKAL) : ತಾಲೂಕಿನ ಬಂದರ ರಸ್ತೆಯ(BUNDER ROAD) ಮುಗ್ದುಂ ಕಾಲೊನಿಯ ಸಮೀಪ ಅಪರಿಚಿತ  ಮೃತ ದೇಹ ಪತ್ತೆಯಾಗಿದೆ.  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ನಾಗರಿಕರ ಆತಂಕ ಹೆಚ್ಚಿಸಿದೆ.

ಮುಗ್ದುಂ ಕಾಲೋನಿಯ ವ್ಯಕ್ತಿಯೊಬ್ಬರು ತಮ್ಮ ಹಾರೆಯ ಹಿಡಿಗೋಲಿಗಾಗಿ ಕಟ್ಟಿಗೆ ಹುಡುಕುತ್ತಿದ್ದಾಗ ದೃಶ್ಯ ಕಂಡು ಬಂದಿದೆ. ತಕ್ಷಣ ಸ್ಥಳೀಯರಿಗೆ ವಿಷಯ ತಿಳಿಸಿದಾಗ ಭಟ್ಕಳ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಒಂದೆರಡು ತಿಂಗಳ ಹಿಂದೆ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನೆಲದಿಂದ ಸುಮಾರು 10ಅಡಿ ಎತ್ತರದಲ್ಲಿ ನೈಲಾನ ಹಗ್ಗದಿಂದ ಶವವು ಮರಕ್ಕೆ ಬಿಗಿದ ಸ್ಥಿತಿಯಲ್ಲಿ ಇದ್ದು, ದೇಹದಿಂದ ರುಂಡ ಬೆರ್ಪಟ್ಟು ನೆಲಕ್ಕೆ ಬಿದ್ದಿದೆ. ಶವದ ಕೆಳಭಾಗದಲ್ಲಿ ಚಪ್ಪಲಿ ಪತ್ತೆಯಾಗಿದ್ದು ಪುರುಷನ ಶವ ಎಂದು ಗುರುತಿಸಲಾಗಿದೆ.

ಮುಖ್ಯ ರಸ್ತೆಯ ಬಳಿಯಲ್ಲಿ ಘಟನೆ ನಡೆದರೂ ಇಷ್ಟು ದಿನ ಘಟನೆ ಬೆಳಕಿಗೆ ಬರದಿರುವದು ಅಚ್ಚರಿಗೆ ಕಾರಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನೂರಾರು ಜನರು ಧಾವಿಸಿ ನೋಡುತ್ತಿರುವುದು ಸಾಮಾನ್ಯವಾಗಿತ್ತು. ಭಟ್ಕಳ ನಗರ ಠಾಣೆಯ (BHATKAL TOWN POLICE STATION l) ಪೊಲೀಸರು ತೆರಳಿ ತನಿಖೆ ಕೈಗೊಂಡಿದ್ದಾರೆ. ಇದು ಕೊಲೆಯೋ, ಆತ್ಮಹತ್ಯೆಯೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನು ಓದಿ : ಮುಡಾ ಸೈಟ್ ವಾಪಾಸ್ ನೀಡಿದ ಸಿಎಂ ಪತ್ನಿ

ದಾಂಡೇಲಿಯಲ್ಲಿ ಕಳ್ಳರಿಗೆ ಹೆಡೆಮುರಿ ಕಟ್ಟಿದ ಪೊಲೀಸರು