ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಬೆಂಗಳೂರು(Bangalore) : ನೂತನಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ (DK Shivakumar)  ಅಧಿಕಾರ ಸ್ವೀಕರಿಸಿ, ಸಂಪುಟ ಸಚಿವರಿಗೆ(Cabinet Minister) ಖಾತೆ ಹಂಚಿಕೆ ಮಾಡುತ್ತಿದ್ದಂತೆ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.

ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ (Ramalinga Reddy),  ಬೆಳಗ್ಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ(Resign Declared) ಮಾಡಿದ್ದಾರೆ.

ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ  ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ(Ramalinga Reddy), ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನು ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಜಲಸಂಪನ್ಮೂಲ ಇಲಾಖೆ ನೀಡಿದ್ದಕ್ಕೆ ಬೇಸರವಾಗಿದೆ ಎಂದ ರೆಡ್ಡಿ,  ಇಂದಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ(Bangalore UrbanDevelopement) ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದರು. ಆದರೆ, ಅದರಂತೆ ನಡೆದುಕೊಂಡಿಲ್ಲ. ಈ ವಿಚಾರ ಜನರಿಗೆ ತಿಳಿಯಬೇಕಾಗಿದೆ  ಎಂದರು.

ತಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕಾಂಗ್ರೆಸ್ ಶಾಸಕನಾಗಿಯೇ(Congress MLA) ಮುಂದುವರಿಯುತ್ತೇನೆ. ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದ ರೆಡ್ಡಿ, ಯಾರ ಬಳಿಯೂ ಎಂದಿಗೂ ಮಂತ್ರಿ ಸ್ಥಾನಕ್ಕಾಗಿ ಭಿಕ್ಷೆ ಬೇಡಿಲ್ಲ. ಯಾರ ಮೇಲೂ ನನಗೆ  ಕೋಪವಿಲ್ಲ, ಕಾಂಗ್ರೆಸ್‌ನಲ್ಲೇ ಇರ್ತೇನೆ ಎಂದಿದ್ದಾರೆ.

ಕಳೆದ 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷ ನನಗೆ ಸಾಕಷ್ಟು ಅವಕಾಶಗಳನ್ನು ಮಾಡಿಕೊಟ್ಟಿದೆ. ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆಯೇ ಹೊರತು, ಕಾಂಗ್ರೆಸ್ ಪಕ್ಷಕ್ಕಲ್ಲ. ನನ್ನ ಜೀವನದಲ್ಲಿ ಎಂದಿಗೂ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ(Ramalinga Reddy) ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ಈ ಧಿಡೀರ್  ನಿರ್ಧಾರ ಕಾಂಗ್ರೆಸ್ ಸರ್ಕಾರದಲ್ಲಿ(Congress Government) ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗಿದೆ. 

ಇದನ್ನು ಓದಿ : ಡಿಕೆ ಶಿವಕುಮಾರ್ ಜೊತೆ ಬಿಕೆ ಹರಿಪ್ರಸಾದ್. ಕಾಂಗ್ರೆಸ್ ಹೈಕಮಾಂಡ್ ಜಾಣ ನಡೆ. ರಾಜ್ಯದಲ್ಲಿ ಸಂಚಲನ ಸಾಧ್ಯತೆ.