ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangaluru) : ರಾಜ್ಯ ಕಾಂಗ್ರೆಸ್ ಸರ್ಕಾರದ(Congress Government) ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದೆ.

ಸೋಮವಾರ ಸಂಜೆ ರಾಜಭವನದಲ್ಲಿ(Rajabhavana) ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಉತ್ತರಕನ್ನಡ(Uttarkannada) ಜಿಲ್ಲೆಯಿಂದ ಮತ್ತೊಮ್ಮೆ ಭಟ್ಕಳ(Bhatkal) ಕ್ಷೇತ್ರದಿಂದ ಆಯ್ಕೆಯಾದ ಮಾಂಕಾಳ್ ವೈದ್ಯ(Mankal Vaidya) ಮತ್ತೊಮ್ಮೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಕೊಪ್ಪಳ ಜಿಲ್ಲೆ ಕನಕಗಿರಿ ಶಾಸಕ ಶಿವರಾಜ್ ತಂಗಡಗಿ,
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್,
ದಾವಣಗೆರೆ ಉತ್ತರ ಶಾಸಕ ಎಸ್.ಎಸ್.ಮಲ್ಲಿಕರ್ಜುನ,
ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ, ಚಿತ್ರದುರ್ಗದ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ನಾಗಮಂಗಲ ಶಾಸಕ ಎನ್.ಚಲುವರಾಯಸ್ವಾಮಿ, ಅರಸಿಕೆರೆ ಶಾಸಕ ಶಿವಲಿಂಗೇಗೌಡ, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್,
ಬಿ.ನಾಗೇಂದ್ರ, ರುದ್ರಪ್ಪ ಲಮಾಣಿ, ನರೇಂದ್ರಸ್ವಾಮಿ, ಗಾಯತ್ರಿ ಶಾಂತೇಗೌಡ, ವಿಜಯಾನಂದ ಕಾಶಪ್ಪನವರ್, ಸಂತೋಷ್ ಲಾಡ್, ಬಸವರಾಜ್ ರಾಯರೆಡ್ಡಿ, ಮಧು ಬಂಗಾರಪ್ಪ, ಅಥಣಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ 20 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.