ಚಿಕ್ಕಬಳ್ಳಾಪುರ :  ದೇಶದಲ್ಲಿ ಅಗ್ನಿ, ವಾಯು, ಜಲ ಕಂಟಕಗಳು ಜಾಸ್ತಿಯಾಗಲಿದೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು  ಕೋಡಿಮಠದ ಶ್ರೀ ಡಾ. ಶಿವಯೋಗಿ ಶಿವಾನಂದ  ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀಗಳು, ಕ್ರೋಧಿ ನಾಮ ಸಂವತ್ಸರದಲ್ಲಿ  ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ  ನಡೆಯಲಿದೆ. ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiha government) ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಕೇಂದ್ರ ಸರ್ಕಾರ (Central Government) ಹಾಗೂ ಮೋದಿ (Modi) ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ ಅವರು ಶ್ರಾವಣದಲ್ಲಿ  ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆಂದು ಹೇಳಿದರು.

ಚಿತ್ರ ನಟ ದರ್ಶನ್ (Actor darshan) ಭವಿಷ್ಯದ ಬಗ್ಗೆ ಮಾತನಾಡಿದ ಸ್ವಾಮಿಗಳು, ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ. ಮನುಷ್ಯ ಸಹನೆ, ನೆಮ್ಮದಿ ಕಳೆದುಕೊಂಡಾಗ ಕೋಪಕ್ಕೆ ತುತ್ತಾಗುತ್ತಾನೆ. ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದು  ಮಾರ್ಮಿಕವಾಗಿ ಹೇಳಿದ್ದಾರೆ.

2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ, ಅಕಾಲಿಕ ಮಳೆ, ಬಾಂಬ್ ಸಿಡಿಯುವ ಸಂಭವ, ಯುದ್ಧ ಭೀತಿ, ಜನರು ತಲ್ಲಣವಾಗುತ್ತಾರೆ. ಭೂಕಂಪನ. ಜಲ ಕಂಟಕ ಎದುರಾಗಲಿದೆ ಎಂದು ಈ ಹಿಂದೆ ಸ್ಪೋಟಕ ಭವಿಷ್ಯ ನುಡಿದಿದ್ದರು.

ಮುಂಬರುವ ದಿನಗಳಲ್ಲಿ ಬರಬಹುದಾದ ಸಮಸ್ಯೆಗಳನ್ನು ಎದುರಿಸಲು ಜನರು ದೈವ ನಂಬುವುದೊಂದೆ ಪರಿಹಾರ, ದೈವ ಮೊರೆ ಹೋಗಬೇಕು ಎಂದು ಶ್ರೀಗಳು ಸಲಹೆ ನೀಡಿದ್ದರು