ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ಕಲಬುರಗಿ(Kalaburgi) : ದುಷ್ಕರ್ಮಿಯೊಬ್ಬ ಸೆಂಟ್ರಲ್ ಜೈಲಿನ ಅಧೀಕ್ಷಕಿ ಅವರ ಕಾರನ್ನು ಸ್ಫೋಟಿಸುವುದಾಗಿ ಆಡಿಯೋ ಸಂದೇಶ(Audio message) ಕಳಿಸಿದ್ದಾನೆ.
ಕಲಬುರಗಿ ನಗರದ(Kalaburgi Town) ಪೊಲೀಸ್ ಇನ್ಸೆಪೆಕ್ಟರ್ (Police Inspector) ಅವರ ಮೊಬೈಲ್‌ಗೆ ಅನಾಮದೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಬಂದಿದೆ. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರಿಂದ ಅಲರ್ಟ್ ಆಗಿರುವ ಅಧಿಕಾರಿಗಳು ಕಾರನ್ನು ಸಿಸಿಟಿವಿ(CCTV) ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದಾರೆ.
ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ(Kalaburgi Jail) ಅನಿತಾ ಅವರು ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಕೈದಿಗಳ ಹೈ ಫೈ ಲೈಫ್ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅನಿತಾ, ಕಾರಾಗೃಹ ಇಲಾಖೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು.
ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಮಂಗಳವಾರ ಪ್ರತಿಭಟನೆ ಮಾಡಿದ್ದರು. ಕಟ್ಟು ನಿಟ್ಟಿನ ರೂಲ್ಸ್ ವಿರುದ್ಧ ಕೇರಳಿದ ಕೈದಿಗಳಿಂದ ಬಂದ ಬೆದರಿಕೆ ಆಡಿಯೋನಾ? ಹತ್ಯೆಗೆ ಸಂಚು ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಇದನ್ನು ಓದಿ : ನಾನ್ ವೆಜ್ ತಿನ್ಬೇಡ ಎಂದು ಬಾಯ್ ಫ್ರೆಂಡ್ ಕಿರುಕುಳ, ಪೈಲಟ್
ಸಾವು.