ಬೆಂಗಳೂರು(BANGLORE): ಇನ್ನೂ ಮೂರೇ ದಿನಗಳಲ್ಲಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP NUMBER PLATES) ಅಳವಡಿಕೆಗೆ ನೀಡಿದ್ದ ಗಡುವು ಮುಕ್ತಾಯವಾಗಲಿದೆ. ಸೆಪ್ಟೆಂಬರ್ 15 ರೊಳಗೆ ನೋಂದಾಯಿಸದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಬರೆ ಬೀಳುವುದು ಗ್ಯಾರಂಟಿ.
ಈಗಾಗಲೇ ಸಾಕಷ್ಟು ಬಾರೀ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಅವಕಾಶ ನೀಡಲಾಗಿದೆ. 2023 ರ ಆಗಸ್ಟ್‌ನಿಂದ ಇವರೆಗೂ ಹಲವು ಬಾರಿ ವಿಸ್ತರಣೆ ಮಾಡಲಾಗಿದೆ. ಆದರೆ ಸೆಪ್ಟೆಂಬರ್ 15 ರ ನಂತರ ಮತ್ತೆ ವಿಸ್ತರಣೆ ಮಾಡುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕ ರಾಜ್ಯದಲ್ಲಿ 2019 ರ ಏಪ್ರಿಲ್ ಒಂದರ ಮೊದಲು ನೋಂದಣಿಯಾದ 2 ಕೋಟಿ ವಾಹನಗಳು ಎಚ್‌ಎಸ್‌ಅರ್‌ಪಿ ಅಳವಡಿಸಿಕೊಳ್ಳಬೇಕು. ಒಟ್ಟು 52 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ. ಇನ್ನೂ 1.48 ಕೋಟಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ಬಾಕಿ ಇದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ.
ಸೆಪ್ಟೆಂಬರ್ 15ರ ನಂತರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಮೊದಲ ಬಾರಿ 500 ರೂ. ದಂಡ ವಿಧಿಸಲಾಗುತ್ತದೆ. ಅನಂತರ ಪ್ರತಿ ಬಾರಿ 1000 ರೂ. ದಂಡ ಹಾಕಲಾಗುತ್ತದೆ.
ಹೀಗಾಗಿ ಎಚ್ಎಸ್ಆರ್ ಪಿ ಮಾಡಿಕೊಳ್ಳದ ವಾಹನ ಸವಾರರು ನಂಬರ್ ಪ್ಲೇಟ್ ಅಳವಡಿಕೆಗೆ ಆನ್‌ಲೈನ್‌ನಲ್ಲಿ ಮಾಡಿಕೊಳ್ಳಲು ಅವಕಾಶವಿದೆ. http//transport.karnataka.gov.in ಅಥವಾ www.siam.in ಮೂಲಕವೂ ಎಚ್‌ಎಸ್‌ಆರ್‌ಪಿ ಅಳವಡಿಸಲು ನೋಂದಣಿ ಮಾಡಿಕೊಳ್ಳಬಹುದು. ಒಂದು ವೇಳೆ ನೋಂದಣಿ ಮಾಡಿಕೊಂಡ ಕೂಡಲೇ ಹೊಸ ನಂಬರ್ ಪ್ಲೇಟ್ ಬರುವುದಿಲ್ಲ. ಸೆಪ್ಟೆಂಬರ್ 15 ರ ಒಳಗೆ ಎಚ್‌ಎಸ್‌ಆರ್‌ಪಿಗೆ ನೋಂದಣಿ ಮಾಡಿಕೊಳ್ಳುತ್ತಾರೋ ಅವರು ಅದರ ರಶೀದಿಯನ್ನು ವಾಹನ ಚಲಾಯಿಸುವಾಗ ತಮ್ಮ ಬಳಿಯಲ್ಲಿ ಇಟ್ಟುಕೊಳ್ಳಬೇಕು. ಈ ಮೂಲಕ ಸಾರಿಗೆ ಅಧಿಕಾರಿಗಳು ಅಥವಾ ಪೊಲೀಸರು ತಪಾಸಣೆ ನಡೆಸುವಾಗ ನಂಬರ್ ಪ್ಲೇಟ್ ಇಲ್ಲ ಎಂದು ಪ್ರಶ್ನಿಸಿದರೆ ರಶೀದಿ ತೋರಿಸಿ ದಂಡದಿಂದ ತಪ್ಪಿಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.