ಇ ಸಮಾಚಾರ ಡಿಜಿಟಲ್ನ್ಯೂಸ್ (esamachara  digital news): ಹೊನ್ನಾವರ(Honnavar) : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ(Uttarakannada District Honnavar) ತಾಲೂಕಿನ ಅಪ್ಸರಕೊಂಡ ಕಡಲತೀರದಲ್ಲಿ(Apsarkonda Beach) ಸಿಡಿಲು ಬಡಿದು ಮೀನುಗಾರನೋರ್ವ ಮೃತಪಟ್ಟ ಘಟನೆ ನಡೆದಿದೆ.

ವಿನಾಯಕ ಖಾರ್ವಿ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಪಾತಿ ದೋಣಿಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸಿಡಿಲು ಬಡಿದ ಪರಿಣಾಮ ವಿನಾಯಕ ಖಾರ್ವಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇನ್ನೊಂದು ಘಟನೆಯಲ್ಲಿ ಕಡಲತೀರಕ್ಕೆ ಬಂದಿದ್ದ ಕೆಲ ಪ್ರವಾಸಿಗರ(Tourist’s) ಮೇಲೂ ಸಿಡಿಲು ಬಡಿದ ಪರಿಣಾಮ ಗಾಯಗಳಾಗಿವೆ. ಗಾಯಾಳುಗಳನ್ನು ಹೊನ್ನಾವರ ಪಟ್ಟಣದ(Honnavar Town) ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆ(Honnavar Police Station) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಹಾವು ಕಡಿತದಿಂದ ಕಾಂಗ್ರೆಸ್ ಮುಖಂಡನ ದುರ್ಮರಣ.