ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಿಸುತ್ತಿದೆ. ಮಳೆ ಮುಂದುವರಿದಿದ್ದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ , ಭಟ್ಕಳ ಹಾಗೂ ಜೋಯಿಡ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅದೇಶಿಸಿದ್ದಾರೆ.
ಈ ಬಗ್ಗೆ ಸಂಬಂಧಪಟ್ಟ ಡಿಡಿಪಿಐ ಅವರಿಗೆ ಸೂಚನೆ ನೀಡಿ ಮುಂದಿನ ದಿನಗಳಲ್ಲಿ ರಜೆ ಹೊಂದಾಣಿಕೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.