ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುತ್ತಿದೆ. ಮಳೆ ವಾತಾವರಣ ಬದಲಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ನಾಳೆ ಆಗಸ್ಟ್ 2 ರಂದು ಸಹ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ , ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆರೆ ವಾತಾವರಣವಿದ್ದು, ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಯಲ್ಲಿ ಜಾಗರೂಕತೆಯಿಂದ ಇರುವಂತೆ ತಿಳಿಸಲಾಗಿದೆ.