ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಕಾರಣದಿಂದ ನಾಳೆ ಜುಲೈ 19 ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಕ್ಕಳ ಹಿತದೃಷ್ಟಿಯಿಂದ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಕರಾವಳಿ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯುತ್ತಿದೆ. ರಾ. ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.