ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಜುಲೈ 15ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿಯ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ ಹಾಗೂ ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅದೇಶಿಸಿದ್ದಾರೆ.
ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆಯಾಗಿ ರಜೆ ನೀಡಲಾಗಿದೆ.