ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಮಂಗಳೂರು(Mangalore) : ಕಾರವಾರದಿಂದ ಮಂಗಳೂರು ಮೂಲಕ ಬೆಂಗಳೂರಿಗೆ (Karwar-Manglore-Banglore) ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಸಹಜ ಹೆರಿಗೆ(Normal Delivery) ಮಾಡಿಸಿದ ಘಟನೆ ನಡೆದಿದೆ.
ರವಿವಾರ ರಾತ್ರಿ ವೇಳೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್(Bantwal B C Road ) ಬಳಿ ಈ ಘಟನೆ ನಡೆದಿದೆ. ಮೈಸೂರು ಮೂಲದ(Mysore Native) ತುಂಬು ಗರ್ಭಿಣಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಳು. ಮಂಗಳೂರು ಜಂಕ್ಷನ್‌ನಿಂದ(Mangalore Junction) ರೈಲು ಹೊರಟಾಗ ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಸುಮಾರು ಅರ್ಧ ತಾಸುಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು. ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಕಾರ್ಯಪ್ರವೃತ್ತರಾಗಿ ಸಹಜ ಹೆರಿಗೆ(Normal Delivery) ಮಾಡಿಸಿದ್ದಾರೆ.
ತುಂಬು ಗರ್ಭಿಣಿಯ(Pregnant) ಸ್ಥಿತಿಯನ್ನು ಗಮನಿಸಿದ ರೈಲಿನಲ್ಲೇ ಇದ್ದ ಇಬ್ಬರು ಮುಸ್ಲಿಮ್ ಮಹಿಳೆಯರು(Muslim Women’s) ಧೈರ್ಯದಿಂದಲೇ ಹೆರಿಗೆ ಮಾಡಿಸಲು ಮುಂದಾದರು. ತಕ್ಷಣ ಅವರು ರೈಲಿನ ಬೋಗಿಗೆ(Train Bogie) ಪರದೆ ಕಟ್ಟಿ ಹೆರಿಗೆಗಾಗಿ ಪ್ರಯತ್ನಿಸಿದರು. ರಕ್ತಸ್ರಾವವಾಗುತ್ತಿದ್ದರೂ ಧೃತಿಗೆಡದೆ ಪ್ರಯತ್ನ ಮುಂದುವರಿಸಿದರು. ಅವರೊಂದಿಗೆ ರೈಲಿನಲ್ಲಿದ್ದ ಇತರ ಮಹಿಳೆಯರೂ ಸಹಕರಿಸಿದರು. ಕೊನೆಗೂ ಸಹಜ ಹೆರಿಗೆ ಮಾಡಿಸುವಲ್ಲಿ ಮಹಿಳೆಯರ ತಂಡ ಯಶಸ್ವಿಯಾಗಿದೆ. ಬಳಿಕ ತಾಯಿ-ಮಗುವನ್ನು(Mother-Child) ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಹಿಳೆಯರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
