ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) ಕಾರವಾರ : ಉತ್ತರಕನ್ನಡ (Uttarkannada) ಜಿಲ್ಲೆಯ ಕಾರವಾರ ನಗರದಲ್ಲಿ(Karwar Town) ಬೀಸಿದ ಭಾರೀ ಗಾಳಿಗೆ(Heavy Wind) ಬೃಹತ್‌ ಮರ ಉರುಳಿ ಬಿದ್ದು, ನಗರಸಭೆ ಪಕ್ಕದಲ್ಲಿರುವ ಸಹಾಯಕ ಸರ್ಕಾರಿ ಅಭಿಯೋಜಕರ (ಎಪಿಪಿ) ಕಚೇರಿ(APP Office) ಸಂಪೂರ್ಣ ಹಾನಿಗೊಳಗಾಗಿದೆ.

ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯಕ್ಕೆ(JMFC Court) ಸಂಬಂಧಿಸಿದ ಎಪಿಪಿ ಕಚೇರಿ ಮೇಲೆ ಮರ ಬಿದ್ದ ಪರಿಣಾಮ ಕಟ್ಟಡಕ್ಕೆ ಭಾರೀ ಹಾನಿಯಾಗಿದ್ದು, ಕಚೇರಿಯಲ್ಲಿದ್ದ ದಾಖಲೆಗಳು ಮತ್ತು ಸಾಮಗ್ರಿಗಳು ಹಾನಿಗೊಳಗಾಗಿರುವ ಸಾಧ್ಯತೆ ಇದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು(Police) ಹಾಗೂ ಅಗ್ನಿಶಾಮಕ ದಳದ(Fire Brigade) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಕಚೇರಿಯೊಳಗಿದ್ದ ಪ್ರಮುಖ ಕಡತಗಳನ್ನು ಸುರಕ್ಷಿತವಾಗಿ ಹೊರತೆಗೆದು ಸ್ಥಳಾಂತರಿಸುವ ಕಾರ್ಯವನ್ನು ಅಗ್ನಿಶಾಮಕ ಸಿಬ್ಬಂದಿ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು  ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಹಾನಿಯ ನಿಖರ ಪ್ರಮಾಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ನಗರದ ಅಳ್ವೇವಾಡದಲ್ಲಿ(Alvewada) ಬೃಹತ್ ಮರ ಬಿದ್ದು ಅನೇಕ ವಾಹನಗಳು ಜಖಂ ಆಗಿದೆ. ಅಲ್ಲದೇ ಮಿನ್ಕ್ರಿಷ್ ರಸ್ತೆಯಲ್ಲಿ ಮರ ಉರುಳಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು.