ಕಾರವಾರ(Karwar) : ಮುರ್ಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ(Murdeshwar Education Tour) ಬಂದು ಮೃತಪಟ್ಟ ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ (Tribute) ಸೂಚಿಸಿದ್ದಾರೆ.
ಕೋಲಾರ(Kolara) ಜಿಲ್ಲೆ ಮುಳಬಾಗಿಲು(Mulabagilu) ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ(Moorarjee Desai Residence School) ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆಂದು ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ತಿಳಿಸಿದ್ದಾರೆ.
ಮುರ್ಡೇಶ್ವರಪ್ರಕರಣ. ಶಿಕ್ಷಕರಅಮಾನತ್ :
ಮುರ್ಡೇಶ್ವರದಲ್ಲಿ ವಿದ್ಯಾರ್ಥಿನಿಯರು ನೀರುಪಾಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮುರಾರ್ಜಿ ಶಾಲಾ ಪ್ರಾಂಶುಪಾಲೆ ಶಶಿಕಲಾ ಅಮಾನತ್ ಮಾಡಲಾಗಿದೆ. ಅತಿಥಿ ಉಪನ್ಯಾಸಕರಾದ ಚೌಡಪ್ಪ, ಶಾರದಮ್ಮ, ನರೇಶ್, ಸುನೀಲ್, ವಿಶ್ವನಾಥ್, ಲಕ್ಷಮ್ಮ ಕೆಲಸದಿಂದ ವಜಾಗೊಳಿಸಲಾಗಿದೆ.
ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ತನದ ಆರೋಪ ಹಿನ್ನೆಲೆ ಅಮಾನತು ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಆದೇಶ ಮಾಡಿದ್ದಾರೆ.
ಇದನ್ನು ಓದಿ : ಸಮುದ್ರ ಪಾಲಾದ ಮೂವರು ವಿದ್ಯಾರ್ಥಿನಿಯರು ಶವವಾಗಿ ಪತ್ತೆ.
ಮುರ್ಡೇಶ್ವರ ಕಡಲತೀರದಲ್ಲಿ ದುರಂತ. ಪ್ರವಾಸಕ್ಕೆ ಬಂದ ಶಾಲಾ ವಿದ್ಯಾರ್ಥಿನಿ ಸಾವು. ಮೂವರು ನಾಪತ್ತೆ.
ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೂಟಕ್ಕೆ ಬೇಡಿಕೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ವಿನೂತನ ಪ್ರತಿಭಟನೆ.