ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಉಡುಪಿ(Udupi) : ರಂಗಕರ್ಮಿ, ಹಿರಿಯ ನಟ ಹೃದಯಾಘಾತದಿಂದ ರಾಜು ತಾಳಿಕೋಟೆ(Raju Talikote) ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.
ಉಡುಪಿಯ ಮಣಿಪಾಲ್ ಆಸ್ಪತ್ರೆಗೆ(Udupi Manipal Hospital) ರಾಜು ಅವರನ್ನು ಇಂದು ಮಧ್ಯಾಹ್ನ ಅನಾರೋಗ್ಯದಿಂದ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ(Hebri) ಸಿನಿಮಾವೊಂದರ ಶೂಟಿಂಗ್ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಇಂದು ಮಧ್ಯಾಹ್ನ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೃತ್ತಿಯಲ್ಲಿ ರಂಗಭೂಮಿ ಕಲಾವಿದರಾಗಿದ್ದ ರಾಜು ತಾಳಿಕೋಟೆ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ತಮ್ಮದೇ ನಾಟಕ ಕಂಪನಿಯನ್ನು ರಾಜು ತಾಳಿಕೋಟೆ ಹೊಂದಿದ್ದರು. ಧಾರವಾಡದ ರಂಗಾಯಣದ ನಿರ್ದೇಶಕರಾಗಿದ್ದ ಅವರು, ಬಿಗ್ ಬಾಸ್ ಸೀಸನ್ 7 ರ ಸ್ಪರ್ಧಿಸಿದ್ದರು. ಅವರ ನಿಧನದಿಂದಾಗಿ ಕನ್ನಡ ರಂಗಭೂಮಿ, ಸಿನಿಮಾ ಕ್ಷೇತ್ರ ಬಡವಾದಂತಾಗಿದೆ.
ಇದನ್ನು ಓದಿ : ಯುಟ್ಯೂಬರ್ ಮುಕಳೆಪ್ಪ ಮದುವೆ ಕೇಸ್. ಮುತಾಲಿಕ್ ವಾರ್ನಿಂಗ್