ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಎಸ್ಎಲ್ ಬೈರಪ್ಪ ಇಂದು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಭೈರಪ್ಪ ಅವರು ಮೈಸೂರಿನಲ್ಲಿ ನಿವೃತ್ತಿ ಜೀವನವನ್ನು ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಬೆಂಗಳೂರಿಗೆ ಬಂದು ವಾಸವಾಗಿದ್ದರು. ಸಣ್ಣಪುಟ್ಟ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕನ್ನಡ ಸಾಹಿತ್ಯದ ಸೇವೆಯಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದರು. ಅವರ ಬರಹಗಳು ಯುವಕರನ್ನ ಆಕರ್ಷಿಸುತ್ತಿದ್ದವು. ಇದೀಗ ಕನ್ನಡ ಸಾಹಿತ್ಯ ಲೋಕದಿಂದ ಅವರು ಮರೆಯಾಗಿದ್ದಾರೆ.
ಕನ್ನಡದ ಪ್ರಮುಖ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿಂತಕರಾಗಿದ್ದ ಎಸ್. ಎಲ್. ಭೈರಪ್ಪ ಅವರ ಕಾದಂಬರಿಗಳು ಭಾರತೀಯ ಭಾಷೆಗಳಿಗೆ ಅನುವಾದಗೊಂಡಿದ್ದು, ವ್ಯಾಪಕ ಜನಪ್ರಿಯತೆ ಗಳಿಸಿವೆ. ಅವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಸ್ಥಾಪಿಸಿದ್ದರು.
ಎಸ್ ಎಲ್ ಭೈರಪ್ಪ ಅವರಿಗೆ ಸಂದ ಪ್ರಶಸ್ತಿಗಳು:
ಪದ್ಮಭೂಷಣ (2023): ಭಾರತ ಸರ್ಕಾರದಿಂದ ನೀಡಲಾದ ದೊಡ್ಡ ಗೌರವ.
ಸರಸ್ವತೀ ಸಮ್ಮಾನ್ (2010): ತಮ್ಮ ‘ಮಂದ್ರ’ ಕಾದಂಬರಿಗೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975): ತಮ್ಮ ‘ದಾಟು’ ಕಾದಂಬರಿಗೆ.
ಸಾಹಿತ್ಯ ಅಕಾಡೆಮಿ ಫೆಲೋಶಿಪ್ (2015): ಅತ್ಯುನ್ನತ ಗೌರವ.
ಭೈರಪ್ಪರ ಪ್ರಮುಖ ಕೃತಿಗಳು:
ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಇತ್ಯಾದಿ ಕೃತಿಗಳು.
2019ರ ಮೈಸೂರು ದಸರಾ ಉದ್ಘಾಟಿಸಿದ್ದಭೈರಪ್ಪ.
ಕನ್ನಡ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ 2019ನೇ ಸಾಲಿನ ಉದ್ಘಾಟಕರನ್ನಾಗಿ ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದರು. ಈ ವೇಳೆ ಮಾತನಾಡಿದ್ದ ಅವರು, ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟಿಸಿರುವುದಕ್ಕೆ ಸಂತಸ ಎಂದಿದ್ದರು. ಹಿರಿಯ ಸಾಹಿತಿಯನ್ನ ಕಳೆದುಕೊಂಡ ಕನ್ನಡ ನಾಡು ಬಡವಾಗಿದೆ.
ಇದನ್ನು ಓದಿ : ಕಾನೂರು ಪ್ರವಾಸಕ್ಕೆ ಬಂದ ವಿದ್ಯಾರ್ಥಿ ಕಾಲು ಜಾರಿ ಬಿದ್ದು ಸಾವು.
ಲವ್ ಜಿಹಾದ್ ಗೆ ಖಂಡನೆ. ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕಳೆಪ್ಪ ಮತ್ತು ಗಾಯತ್ರಿ ಸ್ಪಷ್ಟನೆ
ಭಟ್ಕಳದಲ್ಲಿ ಗಾಂಜಾ ಸೇವನೆ. ಒಪ್ಪಿಕೊಂಡ ಯುವಕನ ಮೇಲೆ ಪ್ರಕರಣ.
ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ.