ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು (Bangaluru): ರಾಷ್ಟ್ರದ ವಿವಿಧ ಹುದ್ದೆ ನಿಭಾಯಿಸಿದ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ (S R Nayak) ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ರವಿವಾರ ಮಧ್ಯಾಹ್ನ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ನ್ಯಾಯಮೂರ್ತಿ ಎಸ್.ಆರ್.ನಾಯಕ್ ಅವರು ಕರ್ನಾಟಕ ಹೈಕೋರ್ಟ್(Karnataka Highcourt) ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ, ಛತ್ತೀಸಗಢ ಹೈಕೋರ್ಟ್ ನ(Chattisghada Highcourt) ನಿವೃತ್ತ ಮುಖ್ಯ ನ್ಯಾಯಮೂರ್ತಿಯಾಗಿ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ(Karnataka State Human Right Commission)  ಮಾಜಿ ಅಧ್ಯಕ್ಷರಾಗಿ,  ಕರ್ನಾಟಕ ಕಾನೂನು ಆಯೋಗದ ಮಾಜಿ ಅಧ್ಯಕ್ಷರಾಗಿ ಮತ್ತು “ನಾಡೋಜ” ಗೌರವಕ್ಕೆ ಭಾಜನರಾಗಿದ್ದರು.

ಆರ್.ಎಂ.ವಿ ಎರಡನೇ ಹಂತದ ಡಾಲರ್ಸ್ ಕಾಲೋನಿಯ(Dollars Colony) ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೋಮವಾರ ಮೇ 19ರಂದು ಸಂಜೆ 4 ಗಂಟೆಗೆ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

ಮೃತರು ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ ಡಾ.ಎನ್‌.ಎಸ್.ರಾಹುಲ್, ಪುತ್ರಿ ನಿಶಾ ಗಾಂವ್ಕರ್ ಹಾಗೂ ಬಂಧು ಬಳಗದವರನ್ನ ಅಗಲಿದ್ದಾರೆ.

ಎಸ್.ಆರ್.ನಾಯಕ್ ಅವರು ಕುಮಟಾ ತಾಲ್ಲೂಕಿನ(Kumta Taluku) ನಾಡುಮಾಸ್ಕೇರಿ(Nadumaskeri) ಗ್ರಾಮದಲ್ಲಿ ಕೃಷಿಕ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಲ್ಲಿ 1945ರ ಜನವರಿ ಒಂದರಂದು   ಜನಿಸಿದರು.

ಮೈಸೂರು ವಿಶ್ವವಿದ್ಯಾಲಯದಿಂದ (Mysore University) ಬಿಎಸ್ಸಿ ಪದವಿ, ಬೆಂಗಳೂರು ವಿಶ್ವವಿದ್ಯಾಲಯದಿಂದ(Bangaluru University) ಕಾನೂನು ಮತ್ತು ಕಾನೂನು ವಿಭಾಗದಲ್ಲಿಯೇ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದರು. 1974ರಲ್ಲಿ ವಕೀಲರಾಗಿ ರಾಜ್ಯ ವಕೀಲರ ಪರಿಷತ್ ನಲ್ಲಿ ಸನ್ನದು ನೋಂದಣಿ ಮಾಡಿಸಿದ ಅವರು ಮೊದಲಿಗೆ ಎಂ.ಗೋಪಾಲಕೃಷ್ಣ ಶೆಟ್ಟಿ ನಂತರ ಎಲ್.ಜಿ.ಹಾವನೂರು ಅವರ ಬಳಿ ಕಿರಿಯ ವಕೀಲರಾಗಿ ವೃತ್ತಿ ನಡೆಸಿದರು. ಕೆಲವು ಕಾಲ ಬೆಂಗಳೂರಿನ ಬಿಎಂಎಸ್ ಮತ್ತು ಎಸ್ ಎಲ್ ಎಸ್ ಆರ್ ಸಿ ಹಾವನೂರು ಕಾನೂನು ಕಾಲೇಜುಗಳಲ್ಲಿ ಅರೆಕಾಲಿಕ ಪ್ರಾಧ್ಯಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ 1994ರ ಫೆಬ್ರುವರಿ 25ರಂದು ನೇಮಕಗೊಂಡ ಅವರು ನಂತರ ಆಂಧ್ರಪ್ರದೇಶ ಹೈಕೋರ್ಟ್ ಗೆ ವರ್ಗಾವಣೆಗೊಂಡಿದ್ದರು. ಆಂಧ್ರಪ್ರದೇಶ ನ್ಯಾಯಾಂಗ ಅಕಾಡೆಮಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ನಂತರ ಛತ್ತೀಸ್ ಗಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎಸ್ ಆರ್ ನಾಯಕ ನಿವೃತ್ತರಾಗಿದ್ದರು.

ಇದನ್ನು ಓದಿ : ಪ್ರಯಾಣಿಕರ ಗಮನಕ್ಕೆ. ಯಶ್ವಂತಪುರ-ಮಂಗಳೂರು-ಕಾರವಾರ ರೈಲು ಸಂಚಾರ ರದ್ದು.

ಮದುವೆ ಮಂಟಪದಲ್ಲಿ ಸಂಭವಿಸಿತು ದುರಂತ. ವಧುವಿಗೆ ಬರ ಸಿಡಿಲು.