ಉಡುಪಿ  :  ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದೇನೆ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ತಮ್ಮ ನಿರ್ಧಾರ ತಿಳಿಸಿದ ಅವರು, ಇಷ್ಟು ವರ್ಷ ನಾನು ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾದಿದ್ದೇನೆ. ಮುಂದೆಯೂ ಮಾಡಳಿದ್ದೇನೆ. ಬಿಜೆಪಿ ಪಕ್ಷ ನನ್ನನ್ನ ಉಚ್ಛಾಟನೆ ಮಾಡಿದರೂ ಪರವಾಗಿಲ್ಲ. ಪಕ್ಷದ ವರಿಷ್ಠರು  ಟಿಕೆಟ್ ಘೋಷಣೆ ಬದಲಾವಣೆ ಮಾಡಿ ನನಗೆ ಅವಕಾಶ ಕೊಡಲಿ ಎಂದು ಅವರು ಒತ್ತಾಯಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡದಿದ್ದರೂ, ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೆ.ಪದವೀಧರ ಚುನಾವಣೆಯಲ್ಲಿ ನನಗೆ ಟಿಕೆಟ್ ವಂಚಿಸಿರೋದು ಕಾರ್ಯಕರ್ತರಿಗೆ ಬಹಳ ನೋವಾಗಿದೆ, ಹೀಗಾಗಿ ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆಂದು ಭಟ್ ಹೇಳಿದ್ದಾರೆ.
ಈ ಬಾರಿ ಕರಾವಳಿ ಭಾಗವನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿದೆ ಎಂದು ಕಿಡಿಕಾರಿದ ರಘುಪತಿ ಭಟ್  ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿ ಕೆಲಸ ಮಾಡಿದ್ದೆ. ಕಳೆದ ಚುನಾವಣೆಯಲ್ಲಿ ಮಾಹಿತಿ ನೀಡದೆ ಟಿಕೆಟ್ ತಪ್ಪಿಸಲಾಗಿತ್ತು ಆದರಿಂದ  ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ಆಲೋಚನೆ ಮಾಡಿದ್ದೆ. ಆರ್ ಎಸ್ ಎಸ್- ಬಿಜೆಪಿ ಪಕ್ಷದ ನಾಯಕರ ಬಳಿ ನಿವೃತ್ತಿ ಬಗ್ಗೆ ಹೇಳಿಕೊಂಡಾಗ  ಪದವೀಧರ ಕ್ಷೇತ್ರದ ಬೇಡಿಕೆ ಇಟ್ಟಾಗ ಭರವಸೆ ಮಾತಾಡಿದ್ದರು. ಆದರೆ  ಟಿಕೆಟ್ ಡಾ. ಧನಂಜಯ ಸರ್ಜಿಗೆ ಗೆ ಘೋಷಣೆ ಮಾಡಿದ್ದಾರೆ. ನನಗೆ ಯಾರು ಟಿಕೆಟ್ ತಪ್ಪಿಸಿದ್ದಾರೋ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.