ಉಡುಪಿ: ಗಗನ ಸಖಿ ಸೇರಿ ನಾಲ್ವರ ಕೊಲೆ ಪ್ರಕರಣದಲ್ಲಿ  ಆರೋಪಿಯಾಗಿರುವ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ಘಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದರು.

ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚುವರಿ ಎಸ್ ಪಿಪಿ ಬಿ.ಎನ್. ಜಗದೀಶ್ ವಾದ ಮಾಡಿದರು. ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ಅವರಿದ್ದ ಉಡುಪಿ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ಎಂಬಲ್ಲಿ ಒಂದೇ ಕುಟುಂಬದ ಐನಾಝ್, ಹಸೀನಾ, ಅಫ್ಘಾನ್, ಅಸೀಮ್ ಎಂಬುವವರನ್ನು ಪ್ರವೀಣ್ ಚೌಗುಲೆ ಹತ್ಯೆ ಮಾಡಿ ಪರಾರಿಯಾಗಿದ್ದ, ಬಳಿಕ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದರು. ಆರೋಪಿ ಪ್ರವೀಣ್‌ ಅರುಣ್ ಚೌಗಲೆ ಮತ್ತು ಅಯ್ನಾಜ್ ಕಳೆದ 8 ತಿಂಗಳಿನಿಂದ ಪರಿಚಯಸ್ಥರಾಗಿದ್ದು, ಏರ್ ಇಂಡಿಯಾ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 8-10 ಬಾರಿ ವಿದೇಶಕ್ಕೆ ತೆರಳುವ ವಿಮಾನದಲ್ಲಿ ಒಟ್ಟಿಗೆ ಕರ್ತವ್ಯ ನಿರ್ವಹಿಸುವ ಅವಕಾಶವು ದೊರಕಿತ್ತು. ಹೀಗೆ ಅವರಿಬ್ಬರ ನಡುವೆ ಗೆಳೆತನವು ಬೆಳೆದಿತ್ತು.

ಆಕೆಗೆ ಓಡಾಟ ನಡೆಸಲು ಸಹಾಯವಾಗಲೆಂದು ಆರೋಪಿ ತನ್ನ ದ್ವಿಚಕ್ರ ವಾಹನವನ್ನು ಆಕೆಯ ಬಳಕೆಗೆ ನೀಡಿದ್ದನು. ಅಯ್ಯಝ್ ಆರೋಪಿಯ ಜೊತೆಗಿನ ಒಡನಾಟದಿಂದ ದೂರ ಸರಿದು, ಮಾತನಾಡುತ್ತಿರಲಿಲ್ಲ. ಹೀಗಾಗಿ ಪ್ರವೀಣ್‌ ಸಿಟ್ಟಾಗಿದ್ದ. ತನ್ನಿಂದ ದೂರ ಸರಿದ ಅಯ್ಯಾಝಳನ್ನು ಕೊಲೆ ಮಾಡುವ ಉದ್ದೇಶದಿಂದ ಆಕೆಯ ಮನೆಗೆ ಆ್ಯಪ್‌ನ ಸಹಾಯದಿಂದ ಆಗಮಿಸಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಅದೇ ವೇಳೆ ತಡೆಯಲು ಬಂದ ಆಕೆಯ ತಾಯಿ ಹಸೀನಾ, ಸಹೋದರಿ ಅಫ್ಘಾನ್, ಮನೆಯ ಹೊರಗೆ ಆಟವಾಡುತ್ತಿದ್ದ ಅಸೀಮ್ ಮನೆಯ ಒಳಗೆ ಬರುತ್ತಿದ್ದ ವೇಳೆ ಆತನಿಗೂ ಚಾಕು ಇರಿದಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಕಳೆದ ಫೆಬ್ರವರಿಯಲ್ಲಿ 15 ಸಂಪುಟಗಳ 2,202 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.