ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಭಟ್ಕಳ(Bhatkal) : ಯಾವುದೇ ಪರವಾನಗಿ ಇಲ್ಲದೆ ಜಾನುವಾರುಗಳನ್ನು(Cattles) ಹಿಂಸಾತ್ಮಕವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಭಟ್ಕಳ(Bhatkal) ಗ್ರಾಮೀಣ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ.
ಶಿರಾಲಿ ಚೆಕ್‌ಪೋಸ್ಟ್(Shirali Checkpost) ಬಳಿ ನಡೆದ ಕಾರ್ಯಾಚರಣೆಯಲ್ಲಿ ಸುಮಾರು ₹13 ಲಕ್ಷ ಮೌಲ್ಯದ ಜಾನುವಾರುಗಳು ಹಾಗೂ ಸಾಗಾಟಕ್ಕೆ ಬಳಸಿದ್ದ ಟಾಟಾ 909 ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡ ಲಾರಿ ಚಾಲಕ ಹಾಗೂ ಕ್ಲೀನರ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಮಂಗಳವಾರ ಬೆಳಿಗ್ಗೆ ವೇಳೆಗೆ ಹೊನ್ನಾವರ ಕಡೆಯಿಂದ ಭಟ್ಕಳದತ್ತ(Honnavar to Bhatkal) ಬರುತ್ತಿದ್ದ ಕೆಎ-37/9555 ನೋಂದಣಿ ಸಂಖ್ಯೆಯ ಟಾಟಾ 909 ಲಾರಿಯನ್ನು ಶಿರಾಲಿ ಚೆಕ್‌ಪೋಸ್ಟ್ ಬಳಿ ಪೊಲೀಸರು ತಪಾಸಣೆ ನಡೆಸಲು ನಿಲ್ಲಿಸಿದ್ದರು. ಆಗ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರೋದು ಗೊತ್ತಾಗಿದೆ.
ಸಾಗಿಸುತ್ತಿದ್ದ ಲಾರಿಯಲ್ಲಿ 13 ಜಾನುವಾರುಗಳನ್ನು ಯಾವುದೇ ಸಾಗಾಟ ಪರವಾನಗಿ ಇಲ್ಲದೆ, ಹಿಂಸಾತ್ಮಕವಾಗಿ ಕಟ್ಟಿ ತುಂಬಲಾಗಿತ್ತು. ಜಾನುವಾರುಗಳಿಗೆ ಸಮರ್ಪಕವಾಗಿ ನೀರು ಹಾಗೂ ಮೇವು ನೀಡದೆ ಸಾಗಿಸಲಾಗುತ್ತಿತ್ತು . ಈ ಜಾನುವಾರುಗಳನ್ನು ವಧೆ ಮಾಡುವ ಉದ್ದೇಶದಿಂದ ಎಲ್ಲಿಂದಲೋ ತಂದು ಸಾಗಿಸಲಾಗುತ್ತಿತ್ತು ಎಂಬುದು ತಿಳಿದು ಬಂದಿದೆ. ಪೊಲೀಸರನ್ನು ಕಂಡ ಲಾರಿ ಚಾಲಕ ಹಾಗೂ ಕ್ಲೀನರ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಜಾನುವಾರುಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡು ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪರಾರಿಯಾಗಿರುವ ಲಾರಿ ಚಾಲಕ ಹಾಗೂ ಕ್ಲೀನರ್‌ರನ್ನು ಬಂಧಿಸಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಭಟ್ಕಳ ಗ್ರಾಮೀಣ ಪೊಲೀಸ್(Bhatkal Rural Police) ಠಾಣೆಯ ಪಿಎಸ್ಐ ಭರಮಪ್ಪ ಬೆಳಗಲಿ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿದ್ದಾರೆ.
ಪಿಎಸ್ಐ ಭರಮಪ್ಪ ಬೆಳಗಲಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಜುನಾಥ ಖಾರ್ವಿ, ನಾಗರಾಜ ಹೋತನಳ್ಳಿ, ಅಂಬರೀಷ್ ಕುಂಬಾರಿ, ಮೋಹನ ಕಬ್ಬೇರ, ಸಂತೋಷ ಹಡಪದ ಹಾಗೂ ಹೋಮ್ ಗಾರ್ಡ್ ವೆಂಕಟ್ರಮಣ ಗೊಂಡ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ಪ್ರಕರಣದ ತನಿಖೆಯನ್ನು ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ಕೈಗೊಂಡಿದ್ದಾರೆ.