ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು :   ದೇಶದ ಬಹುತೇಕ ರಾಜ್ಯಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ.  ಹಾಗೆಯೇ ಇನ್ನೂ ಕೆಲ ದಿನಗಳ ಕಾಲ ರಾಜ್ಯದಲ್ಲೂ ಮಳೆಯಾಗುವ ಬಗ್ಗೆ  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ  ತಮಿಳುನಾಡಿನ ರಾಜಧಾನಿ ಚೈನ್ನೈ, ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ  ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.  ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ರಾಜ್ಯದ ಅಲ್ಲಲ್ಲಿ ಪ್ರತ್ಯೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್  31 ರಂದು ಕರಾವಳಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಗುರುವಾರ (ಅಕ್ಟೋಬರ್ 31)ರಂದು ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಮೇಘಾಲಯ, ಸಿಕ್ಕಿಂ, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲೂ ಯಲ್ಲೋ ಅಲರ್ಟ್ : ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಮಳೆ ಆರ್ಭಟ ಹೆಚ್ಚಾಗಲಿದ್ದು,  ಗುರುವಾರ ಹಾಗೂ ಶುಕ್ರವಾರ ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ  ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಬಗ್ಗೆ  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ : ಶಿರಸಿಯಲ್ಲಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ

ನಟ ದರ್ಶನ್ ಗೆ ಜಾಮೀನು