ಕಾರವಾರ : ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಜಿಲ್ಲಾಧಿಕಾರಿ ಗುರುವಾರ ಜುಲೈ 25ರಂದು ರಜೆ ಘೋಷಿಸಿದ್ದಾರೆ.

ಜುಲೈ 24 ರಿಂದ ಜುಲೈ 26 ರ ಬೆಳಿಗ್ಗೆ ವರೆಗೆ ಬಾರೀ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ದಾಂಡಲಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳು ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.