ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ನಾಗರಿಕರಿಗೆ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ತೀರದ ಮಾಜಾಳಿಯಿಂದ ಭಟ್ಕಳ ವರೆಗೆ ಸಮುದ್ರದಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಜೂನ್ 19 ರ ಬೆಳಗ್ಗೆ 8:30 ರವರೆಗೆ ಸಮುದ್ರದಲ್ಲಿ 3.7- ರಿಂದ 4.2 ಮೀಟರ್ ವ್ಯಾಪ್ತಿಯ ಎತ್ತರದ ಅಲೆಗಳು ಏಳಬಹುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ತಿಳಿಸಿದ್ದಾರೆ.
ಆದ್ದರಿಂದ ಈ ಅವಧಿಯಲ್ಲಿ ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ (ಮುಂಗಾರಿನಲ್ಲಿ ಮೀನುಗಾರಿಕೆಯನ್ನು ನಿರ್ಬಂಧಿಸಲಾಗಿರುತ್ತದೆ.) ಹಾಗೂ ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.
ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಮತ್ತು ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಅಲ್ಲದೇ ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿದೆ.
ತುರ್ತು ಸೇವೆಗೆ ದೂ.ಸಂಖ್ಯೆ 08382-229857, ಮೊ.9483511015 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ರಷ್ಯಾ ಯೋಧನಿಗೆ ಗೋಕರ್ಣದಲ್ಲಿ ಮೋಕ್ಷ ಕಾರ್ಯ.
