ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ವರೆಗೆ
ನಡೆಯಲಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅಧಿಕೃತವಾಗಿ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಿದ್ದಾರೆ. ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ರಾಜ್ಯಪಾಲರು ಹಸಿರು ನಿಶಾನೆ ನೀಡಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ಸ್ಪೀಕ‌ರ್ ಯುಟಿ ಖಾದರ್, ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ATM ಕಾರ್ಡ್ ವಂಚಕನ ಬಂಧನ

ವಿಶ್ವ ಪ್ರಸಿದ್ದ ಮುರ್ಡೇಶ್ವರದಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆ

ನಕ್ಸಲ್ ನಾಯಕನ ಎನ್ಕೌಂಟರ್