ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಯಲ್ಲಾಪುರ(Yallapura) : ತಾಲೂಕಿನ ರಾ. ಹೆದ್ದಾರಿ 63(NH 63) ಮಾವಳ್ಳಿ ಕ್ರಾಸ್ ಹಿಟ್ಟಿನಬೈಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು ಏಳು ಜನ ಗಂಭೀರ ಗಾಯಗೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ. ಬಾದಾಮಿ ತಾಲೂಕಿನ(Badami Taluku) ಗುಳೆದಗುಡ್ಡ ನಿವಾಸಿ ನೀಲವ್ವ ಹರದೊಳ್ಳಿ ( 40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30)ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸುಮಾರು 45 ವರ್ಷದ ಇನ್ನೋರ್ವ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ. ಘಟನೆಯಲ್ಲಿ ಏಳು ಜನ ಗಾಯಗೊಂಡಿದ್ದು ಎಲ್ಲರೂ ಬಾಗಲಕೋಟೆ ಮೂಲದವರು(Bagalakote Native) ಎಂದು ತಿಳಿದು ಬಂದಿದೆ. ಏಳರಿಂದ ವರ್ಷದ ಚಿಕ್ಕ ಚಿಕ್ಕ ಮಕ್ಕಳಿಗೆ ಗಂಭೀರ ಗಾಯ ಹುಬ್ಬಳ್ಳಿ ಕಿಮ್ಸ್ ಗೆ(Kims) ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಯಲ್ಲಾಪುರ ಸಿಪಿಐ ರಮೇಶ್ ಹಾನಾಪುರ, ಪಿಎಸ್ ಐ ಯಲ್ಲಾಲಿಂಗ್ ಕುನ್ನೂರು ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ(Yallapur Police Station) ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
ಇದನ್ನು ಓದಿ : ಚೆಂಡಿಯಾ ಹಳೆ ವಿದ್ಯಾರ್ಥಿಗಳ ಮಾದರಿ ಕಾರ್ಯ. ಅಮೃತ ಮಹೋತ್ಸವ ಕಟ್ಟಡ ಲೋಕಾರ್ಪಣೆ.
ಇಡಿ ದಾಳಿಯ ಸಂದರ್ಭದಲ್ಲಿ ಶಾಸಕ ಸತೀಶ್ ಸೈಲ್ ಮನೆಯಲ್ಲಿ ಸಿಕ್ಕಿದ್ದೇನು ಗೊತ್ತಾ?
	
						
							
			
			
			
			
