ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಧಾರವಾಡ(Dharwad) : ಮೊಬೈಲ್ನಲ್ಲಿ ದಿನವಿಡೀ ರೀಲ್ಸ್(Reels) ನೋಡುತ್ತಿದ್ದ ಮಗಳಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ(Dharwad) ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ಮೇಘಾ ಗೂಬ್ಬನ್ನವರ (20) ಎಂದು ಗುರುತಿಸಲಾಗಿದೆ. ಧಾರವಾಡದ(Dharwad) ಖಾಸಗಿ ಕಾಲೇಜಿನಲ್ಲಿ ಡಿಎಡ್(Ded) ವ್ಯಾಸಂಗ ಮಾಡುತ್ತಿದ್ದ ಮೇಘಾಗೆ ಕಾಲೇಜಿಗೆ ತೆರಳಲು ಪೋಷಕರು ಹೊಸ ಮೊಬೈಲ್ ಕೊಡಿಸಿದ್ದರು ಎನ್ನಲಾಗಿದೆ.
ಆದರೆ ಮೊಬೈಲ್ನಲ್ಲಿ(Mobile) ಮೇಘಾ ದಿನವಿಡೀ ರೀಲ್ಸ್ ನೋಡುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಆಕೆಗೆ ಬೈದು, ಮೊಬೈಲ್ನಲ್ಲಿ ಹೆಚ್ಚು ಸಮಯ ಕಳೆಯದಂತೆ ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಮೇಘಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಗರಗ ಪೊಲೀಸರು(Garaga Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
